Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

2 ಪೂರ್ವಕಾಲ ವೃತ್ತಾಂತ 27 - ಕನ್ನಡ ಸತ್ಯವೇದವು J.V. (BSI)


ಅರಸನಾದ ಯೋತಾಮನು

1 ಯೋತಾಮನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.

2 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ [ಅವನಂತೆ] ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

3 ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

4 ಇದಲ್ಲದೆ ಇವನು ಯೆಹೂದ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.

5 ಮತ್ತು ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರನ್ನು ಜಯಿಸಿದನು; ಅಮ್ಮೋನಿಯರು ಆ ವರುಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತುಸಾವಿರ ಕೋರ್ ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರುಷಗಳಲ್ಲಿಯೂ ಹೀಗೆಯೇ ಕೊಟ್ಟರು.

6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.

7 ಯೋತಾಮನ ಉಳಿದ ಚರಿತ್ರೆಯೂ ಅವನ ಯುದ್ಧಗಳೂ ಪ್ರವರ್ತನೆಗಳೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.

8 ಅವನು ತನ್ನ ಇಪ್ಪತ್ತೈದನೆಯ ವರುಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು.

9 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು