Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಅರಣ್ಯಕಾಂಡ 29 - ಕನ್ನಡ ಸತ್ಯವೇದವು J.V. (BSI)

1 ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

3 ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,

4 ಒಂದೊಂದು ಕುರಿಗೆ ಮೂರು ಮೂರು ಸೇರು ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನೂ;

5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.

7 ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.

8 ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

9 ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,

10 ಕುರಿಯೊಂದಕ್ಕೆ ಮೂರು ಸೇರು ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನೂ;

11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕಯಜ್ಞ, ನಿತ್ಯಸರ್ವಾಂಗಹೋಮ, ಇದರ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳು ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

12 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

13 ಆ ದಿನದಲ್ಲಿ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಹದಿಮೂರು ಹೋರಿಗಳನ್ನೂ ಎರಡು ಟಗರುಗಳನ್ನೂ ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿಗಳನ್ನೂ;

14 ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,

15 ಕುರಿಗೆ ಮೂರು ಸೇರು ಈ ಮೇರೆಗೆ ಎಣ್ಣೆಬೆರಸಿದ ಗೋದಿಹಿಟ್ಟನ್ನೂ;

16 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

17 ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ [ಸರ್ವಾಂಗಹೋಮಕ್ಕಾಗಿ] ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

18 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;

19 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

20 ಮೂರನೆಯ ದಿನದಿಂದ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

21 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ;

22 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

23 ನಾಲ್ಕನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

24 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;

25 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

26 ಐದನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

27 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ;

28 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

29 ಆರನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

30 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ;

31 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

32 ಏಳನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ ;

33 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ;

34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

35 ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆಕೂಡಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.

36 ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುಗಂಧಕರ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;

37 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ

38 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

39 ನೀವು ಕಾಣಿಕೆಯಾಗಿಯಾಗಲಿ ಹರಕೆಯನ್ನು ತೀರಿಸುವದಕ್ಕಾಗಿಯಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯಾರ್ಪಣೆ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.

40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು