Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಆದಿಕಾಂಡ 47 - ಕನ್ನಡ ಸತ್ಯವೇದವು J.V. (BSI)

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ

2 ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.

3 ಫರೋಹನು - ನಿಮ್ಮ ಕೆಲಸವೇನು ಎಂದು ಅವರನ್ನು ಕೇಳಲು ಅವರು - ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಕುರಿಕಾಯುವವರು ಎಂದು ಹೇಳಿದರು.

4 ಅದಲ್ಲದೆ ಅವರು ಅವನಿಗೆ - ಕಾನಾನ್‍ದೇಶದಲ್ಲಿ ಬರವು ಘೋರವಾದ್ದರಿಂದ ನಿನ್ನ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ; ಆದದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್‍ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು ಎಂದು ಹೇಳಿಕೊಂಡರು.

5 ಆಗ ಫರೋಹನು ಯೋಸೇಫನಿಗೆ - ನಿನ್ನ ತಂದೆಯೂ ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರಷ್ಟೆ; ಐಗುಪ್ತದೇಶವು ನಿನ್ನೆದುರಿನಲ್ಲಿ ಅದೆ,

6 ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

8 ಫರೋಹನು - ನಿನಗೆಷ್ಟು ವರುಷಗಳು ಎಂದು ಕೇಳಲು

9 ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ

10 ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.

11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಸ್ಥಾನವನ್ನು ನೇವಿುಸಿ ಅದರೊಳಗೆ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವಾಸ್ತಿಯನ್ನು ಕೊಟ್ಟನು.

12 ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.


ಏಳು ವರುಷದ ಬರಗಾಲದಲ್ಲಿ ಯೋಸೇಫನು ಮಾಡಿದ ಆಡಳಿತ

13 ಬರವು ಬಹು ಘೋರವಾಗಿದ್ದದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿವಿುತ್ತ ಐಗುಪ್ತದೇಶದವರಿಗೂ ಕಾನಾನ್‍ದೇಶದವರಿಗೂ ದಿಕ್ಕುತೋರದೆ ಹೋಯಿತು.

14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.

15 ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.

16 ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು.

17 ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

18 ಆ ವರುಷ ಕಳೆದನಂತರ ಅವರು ಎರಡನೆಯ ವರುಷದಲ್ಲಿ ಅವನ ಬಳಿಗೆ ಬಂದು - ನಮ್ಮ ಹಣವೆಲ್ಲಾ ವೆಚ್ಚವಾಗಿ ಹೋಗಿದೆ; ನಮ್ಮ ಕುರಿದನಗಳು ಸ್ವಾವಿುಯ ವಶವಾದವು; ಹೀಗಿರುವದರಿಂದ ನಮ್ಮ ಭೂವಿುಯೂ ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾವಿುಗೆ ಮರೆಮಾಜದೆ ತಿಳಿಸಬೇಕಾಯಿತು.

19 ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು

20 ಯೋಸೇಫನು ಐಗುಪ್ತದೇಶದ ಎಲ್ಲಾ ಸಾಗುವಳಿಯ ಭೂವಿುಯನ್ನು ಫರೋಹನಿಗೋಸ್ಕರ ಕೊಂಡುಕೊಂಡನು. ಬರವು ಐಗುಪ್ತ್ಯರಿಗೆ ಘೋರವಾಗಿದ್ದದರಿಂದ ಅವರೆಲ್ಲರೂ ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿಯ ಭೂವಿುಯೆಲ್ಲಾ ಫರೋಹನದಾಯಿತು.

21 ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

22 ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ.

23 ಯೋಸೇಫನು ಪ್ರಜೆಗಳಿಗೆ - ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂವಿುಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂವಿುಯಲ್ಲಿ ಬಿತ್ತಿರಿ.

24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.

25 ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ಯಾಕೋಬನು ತನ್ನ ಉತ್ತರಕ್ರಿಯೆಗಳ ವಿಷಯದಲ್ಲಿ ಆಜ್ಞೆಕೊಟ್ಟು ಯೋಸೇಫನ ಇಬ್ಬರು ಮಕ್ಕಳನ್ನು ದತ್ತು ತೆಗೆದುಕೊಂಡು ಆಶೀರ್ವದಿಸಿದ್ದು

27 ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

28 ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರುಷ ಇದ್ದನು. ಅವನ ಜೀವಿತಕಾಲವು ಒಟ್ಟಿಗೆ ನೂರ ನಾಲ್ವತ್ತೇಳು ವರುಷಗಳು.

29 ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.

30 ನಾನು ಪಿತೃಗಳಲ್ಲಿ ಸೇರಿದಾಗ ನನ್ನ ಶವವನ್ನು ಐಗುಪ್ತದೇಶದಿಂದ ತೆಗೆದುಕೊಂಡು ಹೋಗಿ ಆ ಪಿತೃಗಳ ಶ್ಮಶಾನ ಭೂವಿುಯಲ್ಲಿಯೇ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂಬದಾಗಿ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕೆಂದು ಹೇಳಲು ಅವನು - ನೀನು ಹೇಳಿದಂತೆಯೇ ಮಾಡುತ್ತೇನೆ ಅಂದನು.

31 ಇಸ್ರಾಯೇಲನು - ಪ್ರಮಾಣ ಮಾಡು ಅನ್ನಲು ಅವನು ಪ್ರಮಾಣಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿ ದೇವರಿಗೆ ನಮಸ್ಕಾರಮಾಡಿದನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು