Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 100 - ಕನ್ನಡ ಸತ್ಯವೇದವು J.V. (BSI)


ಲೋಕವೆಲ್ಲಾ ಇಸ್ರಾಯೇಲ್ಯರ ದೇವರನ್ನು ಆರಾಧಿಸಬೇಕೆಂಬ ಪ್ರಬೋಧನೆ ಕೃತಜ್ಞತಾಯಜ್ಞ ಕೀರ್ತನೆ
( ಕೀರ್ತ. 95 )

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷ ಮಾಡಿರಿ.

2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಉತ್ಸಾಹಧ್ವನಿಮಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.

3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.

4 ಕೃತಜ್ಞತಾಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ ಕೀರ್ತನೆಯೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರ ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.

5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು