Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 101 - ಕನ್ನಡ ಸತ್ಯವೇದವು J.V. (BSI)


ರಾಜಶ್ರೇಷ್ಠನ ಪ್ರತಿಜ್ಞೆ ದಾವೀದನ ಕೀರ್ತನೆ
( ಕೀರ್ತ. 15 , 24 )

1 ಪ್ರೀತಿನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.

3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

4 ಮೂರ್ಖತನವು ನನ್ನನ್ನು ಬಿಟ್ಟುಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.

5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ.

6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು. ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

7 ಮೋಸಗಾರನು ನನ್ನ ಮನೆಯಲ್ಲಿರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ ಪ್ರತಿದಿನವೂ ಬೆಳಗಿನಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು