Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 11 - ಕನ್ನಡ ಸತ್ಯವೇದವು J.V. (BSI)


ಯೆಹೋವನ ಶರಣರಿಗೆ ದುರ್ಗತಿಯಿಲ್ಲವೆಂಬದು ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ದಾವೀದನದು

1 ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ.

2 ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;

3 ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ. ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು ಎಂದು ನನಗೆ ಹೇಳುವದೇಕೆ?

4 ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

5 ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.

6 ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.

7 ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು