Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 110 - ಕನ್ನಡ ಸತ್ಯವೇದವು J.V. (BSI)


ಚೀಯೋನಿನ ಅರಸನಿಗೆ ಯೆಹೋವನ ಸಿಂಹಾಸನವೂ ಮಹಾಯಾಜಕೋದ್ಯೋಗವೂ ಸಿಕ್ಕುವವೆಂಬ ವಾಗ್ದಾನ ದಾವೀದನ ಕೀರ್ತನೆ
( ಕೀರ್ತ. 2 , 21 )

1 ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.

2 ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.

4 ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.

5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.

7 [ಒಡೆಯನು] ದಾರಿಯಲ್ಲಿ ಹಳ್ಳದ ನೀರು ಕುಡಿದು ತಲೆಯೆತ್ತುವನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು