Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 112 - ಕನ್ನಡ ಸತ್ಯವೇದವು J.V. (BSI)


ಭಕ್ತರ ಧನ್ಯತೆ
( ಕೀರ್ತ. 111 )

1 ಯಾಹುವಿಗೆ ಸ್ತೋತ್ರ! ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವದು; ನೀತಿವಂತನ ವಂಶವು ಶುಭಹೊಂದುವದು.

3 ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.

4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.

5 ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.

6 ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.

7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.

8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸವಿರುವದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವದಿಲ್ಲ.

9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.

10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು