Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 113 - ಕನ್ನಡ ಸತ್ಯವೇದವು J.V. (BSI)


ಮಹೋನ್ನತನೂ ದೀನಬಂಧುವೂ ಆಗಿರುವ ಯೆಹೋವನನ್ನು ಸ್ತುತಿಸುವದು

1 ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.

2 ಇಂದಿನಿಂದ ಯುಗಯುಗಕ್ಕೂ ಯೆಹೋವನಾಮವು ಕೀರ್ತಿಸಲ್ಪಡಲಿ.

3 ಯೆಹೋವನ ನಾಮವು ಮೂಡಣಿಂದ ಪಡುವಣವರೆಗೂ ಸ್ತುತಿಹೊಂದಲಿ.

4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಗಳಲ್ಲಿ ಮೆರೆಯುತ್ತದೆ.

5 ನಮ್ಮ ಯೆಹೋವದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ

6 ಆಕಾಶವನ್ನೂ ಭೂವಿುಯನ್ನೂ ನೋಡಲಿಕ್ಕೆ ಬಾಗುತ್ತಾನೆ.

7 ಆತನು ದೀನರನ್ನು ಧೂಳಿಯಿಂದ ಎಬ್ಬಿಸಿ ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

8 ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.

9 ಬಂಜೆಯು ಮಕ್ಕಳೊಂದಿಗಳಾಗಿ ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯಾಹುವಿಗೆ ಸ್ತೋತ್ರ!

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು