Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 114 - ಕನ್ನಡ ಸತ್ಯವೇದವು J.V. (BSI)


ಇಸ್ರಾಯೇಲ್ಯರ ರಕ್ಷಕನ ಮಹತ್ತು

1 ಇಸ್ರಾಯೇಲ್ಯರು ಐಗುಪ್ತ ದೇಶವನ್ನೂ ಯಾಕೋಬನ ಮನೆತನದವರು ಅನ್ಯಭಾಷೆಯ ಜನಾಂಗವನ್ನೂ ಬಿಟ್ಟ ಮೇಲೆ

2 ಯೆಹೂದವು ದೇವರ ಪರಿಶುದ್ಧವಾಸಸ್ಥಾನವೂ ಇಸ್ರಾಯೇಲು ಆತನ ರಾಜ್ಯವೂ ಆದವು.

3 ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.

4 ಪರ್ವತಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.

5 ಸಮುದ್ರವೇ, ನಿನಗೇನಾಯಿತು? ಯಾಕೆ ಓಡಿಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?

6 ಪರ್ವತಗಳೇ, ನೀವು ಟಗರುಗಳಂತೆಯೂ ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಯಾಕೆ ಹಾರಾಡುತ್ತೀರಿ?

7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.

8 ಆತನು ಬಂಡೆಯನ್ನು ಕೆರೆಯನ್ನಾಗಿಯೂ ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು