Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 121 - ಕನ್ನಡ ಸತ್ಯವೇದವು J.V. (BSI)


ಯೆಹೋವನ ಭಕ್ತಪಾಲನೆ ಯಾತ್ರಾಗೀತ
( ಆದಿ. 28.15 )

1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?

2 ಭೂಮ್ಯಾಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ ನನ್ನ ಸಹಾಯವು ಬರುತ್ತದೆ.

3 ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

4 ಇಗೋ, ಇಸ್ರಾಯೇಲ್ಯರನ್ನು ಕಾಯುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.

5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.

6 ಹಗಲಲ್ಲಿ ಸೂರ್ಯನೂ ಇರುಳಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.

7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

8 ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು