Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 123 - ಕನ್ನಡ ಸತ್ಯವೇದವು J.V. (BSI)


ಬಾಧಿಸಲ್ಪಟ್ಟವನ ನಿರೀಕ್ಷೆ ಯಾತ್ರಾಗೀತ
( ನೆಹೆ. 4.1-6 )

1 ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.

2 ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅಪಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;

4 ಲೋಕಭೋಗಿಗಳ ಹಾಸ್ಯದಿಂದಲೂ ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತುಹೋಯಿತು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು