Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 124 - ಕನ್ನಡ ಸತ್ಯವೇದವು J.V. (BSI)


ಯೆಹೋವನೊಬ್ಬನೇ ರಕ್ಷಕನು ಯಾತ್ರಾಗೀತ; ದಾವೀದನದು
( ಕೀರ್ತ. 129 ; ನೆಹೆ. 4.7-23 )

1 ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತೆಂದು ಇಸ್ರಾಯೇಲ್ಯರೇ ಹೇಳಲಿ.

2 ನರರು ನಮಗೆ ವಿರೋಧವಾಗಿ ಎದ್ದಾಗ ಯೆಹೋವನು ನಮಗಿಲ್ಲದಿದ್ದರೆ

3 ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಮುಣುಗಿಸುತ್ತಿತ್ತು;

5 ಮೀರಿದ ಪ್ರವಾಹವು ನಮ್ಮನ್ನು ಮುಣುಗಿಸಿಬಿಡುತ್ತಿತ್ತು.

6 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಕೊಳ್ಳೆಕೊಡಲಿಲ್ಲ.

7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

8 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವದು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು