Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 126 - ಕನ್ನಡ ಸತ್ಯವೇದವು J.V. (BSI)


ಸೆರೆಯಿಂದ ಬಿಡುಗಡೆಹೊಂದಿದವರು ತಮಗೆ ಸಂಪೂರ್ಣ ಸೌಭಾಗ್ಯ ದೊರೆಯಬೇಕೆಂದು ದೇವರನ್ನು ಪ್ರಾರ್ಥಿಸುವದು ಯಾತ್ರಾಗೀತ
( ಕೀರ್ತ. 85 )

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರಿಗಿ ಬರಮಾಡು

5 ಅಳುತ್ತಾ ಬಿತ್ತುವವರು ಹಾಡುತ್ತಾ ಕೊಯ್ಯುವರು.

6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು