Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 127 - ಕನ್ನಡ ಸತ್ಯವೇದವು J.V. (BSI)


ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು ಯಾತ್ರಾಗೀತ; ಸೊಲೊಮೋನನದು
( ನೆಹೆ. 7.3 , 4 )

1 ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.

2 ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.

3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವಾಸ್ತ್ಯವು; ಗರ್ಭಫಲವು ಆತನ ಬಹುಮಾನವೇ.

4 ಯೌವನದಲ್ಲಿ ಹುಟ್ಟಿದ ಮಕ್ಕಳು ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;

5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು