ಕೀರ್ತನೆಗಳು 128 - ಕನ್ನಡ ಸತ್ಯವೇದವು J.V. (BSI)ಭಕ್ತನ ಭಾಗ್ಯ ಯಾತ್ರಾಗೀತ ( ಕೀರ್ತ. 127 , 144.12-15 ) 1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು. 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು. 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇವಿುನ ಸೌಭಾಗ್ಯವನ್ನು ನೋಡುವವನಾಗು. 6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲ್ಯರಿಗೆ ಶುಭವಾಗಲಿ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India