Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 133 - ಕನ್ನಡ ಸತ್ಯವೇದವು J.V. (BSI)


ಐಕಮತ್ಯವು ಶ್ರೇಷ್ಠವಾದದ್ದು ಯಾತ್ರಾಗೀತ; ದಾವೀದನದು

1 ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!

2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ

3 ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು