Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 146 - ಕನ್ನಡ ಸತ್ಯವೇದವು J.V. (BSI)


ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು

1 ಯಾಹುವಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.

2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

3 ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;

4 ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು.

5 ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.

6 ಭೂವಿು, ಆಕಾಶ, ಸಾಗರ, ಚರಾಚರ ಇವುಗಳನ್ನು ನಿರ್ಮಿಸಿದವನೂ ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ

7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿದವರಿಗೆ ಆಹಾರಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.

8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.

10 ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ!

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು