Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 15 - ಕನ್ನಡ ಸತ್ಯವೇದವು J.V. (BSI)


ಯೆಹೋವನ ಸನ್ನಿಧಿಗೆ ಯೋಗ್ಯರು ಯಾರೆಂಬದು ದಾವೀದನ ಕೀರ್ತನೆ
( ಯೆಶಾ. 33.14-16 )

1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳುಕೊಂಡಿರುವದಕ್ಕೆ ಯೋಗ್ಯನು ಯಾವನು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

2 ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.

3 ಅವನು ಚಾಡಿಯನ್ನು ಹೇಳದವನೂ ಮತ್ತೊಬ್ಬರಿಗೆ ಅನ್ಯಾಯಮಾಡದವನೂ ಯಾರನ್ನೂ ನಿಂದಿಸದವನೂ ಆಗಿರಬೇಕು.

4 ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು