Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 2 - ಕನ್ನಡ ಸತ್ಯವೇದವು J.V. (BSI)


ಯೆಹೋವನು ಅಭಿಷೇಕಿಸಿದವನ ಸರ್ವಾಧಿಪತ್ಯ
( ಕೀರ್ತ. 110 )

1 ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?

2 ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.

3 ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತು ಬೇಡಿಗಳನ್ನು ಮುರಿದು ಬೀಸಾಡೋಣ ಎಂದು ಮಾತಾಡಿಕೊಳ್ಳುತ್ತಾರಲ್ಲಾ.

4 ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

5 ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ

6 ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.

7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.

8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.

9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.

10 ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.

11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.

12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು