ಕೀರ್ತನೆಗಳು 3 - ಕನ್ನಡ ಸತ್ಯವೇದವು J.V. (BSI)ಶತ್ರುಬಾಧಿತನಾದ ದೇವಭಕ್ತನ ಉದಯಗೀತ ದಾವೀದನ ಕೀರ್ತನೆ; ಅವನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿ ಹೋದಾಗ ರಚಿಸಿದ್ದು ( 2 ಸಮು. 15—18 ) 1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ. 2 ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ. 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4 ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ. 5 ಯೆಹೋವನು ನನ್ನನ್ನು ಕಾಪಾಡುವವನಾದ್ದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. 6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. 7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. 8 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India