Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 67 - ಕನ್ನಡ ಸತ್ಯವೇದವು J.V. (BSI)


ದೇವಸ್ತುತಿಪ್ರೋತ್ಸಾಹ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು
( ಕೀರ್ತ. 98 )

1 ದೇವರೇ, ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸು; ಪ್ರಸನ್ನ ಮುಖದಿಂದ ನಮ್ಮನ್ನು ನೋಡು. ಸೆಲಾ.

2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.

3 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.

5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

6 ಭೂವಿುಯು ಒಳ್ಳೇ ಬೆಳೆಯನ್ನು ಕೊಟ್ಟಿರುತ್ತದೆ. ದೇವರು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು;

7 ಆತನು ನಮ್ಮನ್ನು ಆಶೀರ್ವದಿಸುವನು. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು