Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 81 - ಕನ್ನಡ ಸತ್ಯವೇದವು J.V. (BSI)


ಉತ್ಸವಕ್ಕಾಗಿ ಕೂಡಿಬಂದವರಲ್ಲಿ ದೇವಭಕ್ತಿಯನ್ನು ಹುಟ್ಟಿಸುವ ಪ್ರಬೋಧನೆ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ
( ಕೀರ್ತ. 8 , 84 )

1 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ ಸ್ವರಮಂಡಲವನ್ನೂ ಬಾರಿಸಿರಿ.

3 ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

4 ಇದು ಇಸ್ರಾಯೇಲ್ಯರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.

5 ಆತನು ಐಗುಪ್ತದೇಶವನ್ನು ಬಾಧಿಸಲಿಕ್ಕೆ ಹೊರಟಾಗ ನೆನಪಿಗಾಗಿ ಯೋಸೇಫ್ಯರಲ್ಲಿ ಇದನ್ನು ನೇವಿುಸಿದನು. ಗುರುತಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನಂದರೆ -

6 ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.

7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.

8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ. ಇಸ್ರಾಯೇಲ್ಯರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು -

9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;

10 ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.

12 ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.

13 ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಮಾತನ್ನು ಕೇಳಿ ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೇದು!

14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು.

15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.

16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು