ಕೀರ್ತನೆಗಳು 93 - ಕನ್ನಡ ಸತ್ಯವೇದವು J.V. (BSI)ಯೆಹೋವನೇ ನಿತ್ಯನಾದ ರಾಜಾಧಿರಾಜನು ( ವಿಮೋ. 15 ; ಯೆಶಾ. 52.7 ; ಕೀರ್ತ. 96 , 97 , 99 ) 1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ. 2 ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ. 3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ. 4 ಜಲರಾಶಿಗಳ ಘೋಷಕ್ಕಿಂತಲೂ ಮಹಾತರಂಗಗಳ ಗರ್ಜನೆಗಿಂತಲೂ ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. 5 ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India