Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 95 - ಕನ್ನಡ ಸತ್ಯವೇದವು J.V. (BSI)


ದೇವರನ್ನು ವಿಶ್ವಾಸಪೂರ್ವಕವಾಗಿ ಆರಾಧಿಸುವದು
( ಕೀರ್ತ. 81 , 96—100 )

1 ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.

3 ಯೆಹೋವನು ಮಹಾದೇವರೂ ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.

4 ಭೂವಿುಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.

5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ. ಒಣನೆಲವು ಆತನ ಕೈಕೆಲಸವೇ.

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -

8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ಅವರು ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಶೋಧಿಸಿದರು.

10 ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.

11 ಆದದರಿಂದ ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು