Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 98 - ಕನ್ನಡ ಸತ್ಯವೇದವು J.V. (BSI)


ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವದು ಕೀರ್ತನೆ
( ಕೀರ್ತ. 67 )

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

3 ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.

4 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.

6 ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.

7 ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಭೂವಿುಯೂ ಅದರ ನಿವಾಸಿಗಳೂ ಘೋಷಿಸಲಿ.

8 ನದಿಗಳು ಚಪ್ಪಾಳೆಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು