Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಜೆಕರ್ಯ 2 - ಕನ್ನಡ ಸತ್ಯವೇದವು J.V. (BSI)


ಅಳತೆಯ ನೂಲಿನವನ ವಿಷಯವಾದ ಕನಸು

1 ನಾನು ಕಣ್ಣೆತ್ತಿನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.

2 ನಾನು ಅವನನ್ನು - ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವನು ನನಗೆ - ಯೆರೂಸಲೇವಿುನ ಅಗಲ ಉದ್ದ ಇಷ್ಟಿಷ್ಟಿರಬೇಕೆಂದು ಅಳೆದು ನೋಡುವದಕ್ಕೆ ಹೋಗುತ್ತೇನೆ ಎಂಬದಾಗಿ ಹೇಳಿದನು.

3 ಇಗೋ, ವಿವರಿಸುವ ದೇವದೂತನು ಮುಂದರಿದು ತನ್ನನ್ನು ಎದುರುಗೊಳ್ಳುವದಕ್ಕೆ ಬಂದ ಮತ್ತೊಬ್ಬ ದೇವದೂತನಿಗೆ ಹೀಗೆ ಹೇಳಿದನು -

4 ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.

5 ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಬಾಬೆಲಿನಲ್ಲಿ ನಿಂತವರು ಚೀಯೋನಿಗೆ ಬರಬೇಕೆಂಬ ಎಚ್ಚರಿಕೆ

6 ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.

7 ಎಲೈ, ಬಾಬೆಲ್‍ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.

8 ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -

9 ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.

10 ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.

11 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.

12 ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವಾಸ್ತ್ಯವನ್ನಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.

13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು