Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಪ್ರಕಟನೆ 10 - ಕನ್ನಡ ಸತ್ಯವೇದವು J.V. (BSI)


ಬಲಿಷ್ಠನಾದ ದೇವದೂತನು ಕೈಯಲ್ಲಿ ಚಿಕ್ಕ ಸುರುಳಿಯನ್ನು ಹಿಡಿದುಕೊಂಡು - ಇನ್ನೂ ಸಾವಕಾಶವಿಲ್ಲದೆ ದೇವರ ಗೂಢ ಸಂಕಲ್ಪವು ನೆರವೇರುವದೆಂದು ಪ್ರಕಟಿಸಿದ್ದು

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;

2 ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು; ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂವಿುಯ ಮೇಲೆಯೂ ಇಟ್ಟು

3 ಸಿಂಹವು ಗರ್ಜಿಸುವ ಪ್ರಕಾರ ಮಹಾ ಶಬ್ದದಿಂದ ಕೂಗಿದನು.

4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.

5 ಅನಂತರ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ

7 ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.

8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತಾಡಿ - ನೀನು ಹೋಗಿ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೋ ಎಂದು ಹೇಳಿತು.

9 ನಾನು ಆ ದೂತನ ಬಳಿಗೆ ಹೋಗಿ - ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ - ನೀನು ಇದನ್ನು ತೆಗೆದುಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿದನು.

10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು.

11 ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು