Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆರೆಮೀಯ 45 - ಕನ್ನಡ ಸತ್ಯವೇದವು J.V. (BSI)


ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ

2 ಈ ವಾಕ್ಯವನ್ನು ಅವನಿಗೆ ನುಡಿದನು - ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ - ನೀನು, ನನ್ನ ಗತಿಯನ್ನು ಏನು ಹೇಳಲಿ!

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.

4 ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.

5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು