Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಶಾಯ 12 - ಕನ್ನಡ ಸತ್ಯವೇದವು J.V. (BSI)


ಯೆಹೋವನ ಸ್ತೋತ್ರಗೀತಗಳು

1 ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.

2 ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.

3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.

4 ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.

5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6 ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು