Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೋನನು 4 - ಕನ್ನಡ ಸತ್ಯವೇದವು J.V. (BSI)


ದೇವರು ಪ್ರವಾದಿಯ ಹಟವನ್ನು ತಿದ್ದಿದ್ದು

1 ಇದರಿಂದ ಯೋನನಿಗೆ ಬಹು ಕರಕರೆಯಾಯಿತು;

2 ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.

3 ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.

4 ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.

5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಲಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕೂತುಕೊಂಡಿದ್ದನು.

6 ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.

7 ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.

8 ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.

9 ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.

10 ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;

11 ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು