Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೋಬ 25 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಶೂಹ್ಯನಾದ ಬಿಲ್ದದನು ಹೀಗಂದನು -

2 ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,

3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿ ಮೂಡುವದಿಲ್ಲ?

4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?

5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.

6 ಹೀಗಿರುವಲ್ಲಿ ನರಹುಳವು ಎಷ್ಟೋ ಅಶುದ್ಧವು! ನರಕ್ರಿವಿುಯು ಎಷ್ಟೋ ಅಪವಿತ್ರವು!

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು