Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಹೋಶೇಯ 3 - ಕನ್ನಡ ಸತ್ಯವೇದವು J.V. (BSI)


ಪತಿದ್ರೋಹಮಾಡಿದವಳಲ್ಲಿ ಪತಿಯ ತಪ್ಪದ ಪ್ರೀತಿ

1 ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು

2 ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -

3 ನನಗಾಗಿ ಬಹು ದಿವಸ ತಾಳಿಕೊಂಡಿರು; ಸೂಳೆತನಮಾಡಬೇಡ, ಯಾವನನ್ನೂ ಸೇರಬೇಡ; ನಾನು ಸಹ ನಿನ್ನವನೇ ಎಂದು ಹಾಗೆ ಇರುವೆನು ಎಂದು ಹೇಳಿದೆನು.

4 ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು