Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಹೋಶೇಯ 5 - ಕನ್ನಡ ಸತ್ಯವೇದವು J.V. (BSI)

1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.

3 ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲು ನನಗೆ ಮರೆಯಲ್ಲ; ಎಫ್ರಾಯೀಮೇ, ನೀನೀಗ ಸೂಳೆತನಮಾಡಿದ್ದೀ, ಇಸ್ರಾಯೇಲು ಹೊಲೆಯಾಗಿದೆ.

4 ಅವು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಬಿಡವು; ವ್ಯಭಿಚಾರ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ಅರಿಯವು.

5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧಸಾಕ್ಷಿಯಾಗಿದೆ; ಇಸ್ರಾಯೇಲೂ ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವದು.

6 ಅವು ತಮ್ಮ ದನಕುರಿಗಳ ಸಂಗಡ ಯೆಹೋವನನ್ನು ಶರಣುಹೊಗಲು ಹೊರಡುವವು; ಆತನು ಸಿಕ್ಕನು, ಅವುಗಳ ಕಡೆಯಿಂದ ಮರೆಯಾಗಿದ್ದಾನೆ.

7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ ಅವುಗಳ ಭೂಸ್ವಾಸ್ತ್ಯಗಳನ್ನೂ ಈಗ ಈ ಮುಂದಿನ ತಿಂಗಳು ನುಂಗಿಬಿಡುವದು.

8 ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,

9 ಬೆನ್ಯಾಮೀನೇ, ಹಿಂದೆ ನೋಡು! ಖಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.

10 ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.

11 ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.

12 ನಾನು ಎಫ್ರಾಯೀವಿುಗೆ ನುಸಿ, ಯೆಹೂದ ಕುಲಕ್ಕೆ ಕುಟ್ಟೆ.

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.

14 ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.


ಇಸ್ರಾಯೇಲಿನ ವ್ಯರ್ಥಪಶ್ಚಾತ್ತಾಪ

15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು