Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 108 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 108
ಒಂದು ಗೀತೆ. ದಾವೀದನ ಕೀರ್ತನೆ.

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು.

2 ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯವನ್ನು ಎಚ್ಚರಗೊಳಿಸುವೆನು.

3 ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.

4 ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.

5 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.

6 ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.

7 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

8 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.

9 ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”

10 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?

11 ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?

12 ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.

13 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು