Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 13 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 13
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.

1 ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?

2 ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?

3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

4 “ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.

5 ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.

6 ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು