ಕೀರ್ತನೆಗಳು 138 - ಕನ್ನಡ ಸಮಕಾಲಿಕ ಅನುವಾದಕೀರ್ತನೆ 138 ದಾವೀದನ ಕೀರ್ತನೆ. 1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು. 2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. 3 ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. 4 ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ. 5 ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ. 6 ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ. 7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. 8 ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ. |
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.
Biblica, Inc.