Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 149 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 149

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.

2 ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.

3 ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.

4 ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.

5 ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.

6 ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.

7 ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.

8 ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.

9 ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು