Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 15 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 15
ದಾವೀದನ ಕೀರ್ತನೆ.

1 ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?

2 ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;

3 ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;

4 ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.

5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು