Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 23 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 23
ದಾವೀದನ ಕೀರ್ತನೆ.

1 ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.

2 ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.

3 ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.

4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.

5 ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6 ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು