Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 47 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 47
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಗೀತೆ.

1 ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.

2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.

3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.

4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.

5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.

6 ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.

7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.

8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.

9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು