Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 63 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 63
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ.

1 ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.

2 ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.

3 ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.

4 ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು. ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.

5 ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.

6 ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.

7 ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ. ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು.

8 ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ. ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ.

9 ನನ್ನ ಪ್ರಾಣಕ್ಕೆ ಕೇಡು ಬಯಸುವವರು ತಾವೇ ನಾಶವಾಗುವರು ಅವರು ಭೂಮಿಯ ಆಳಕ್ಕೆ ಹೋಗುವರು.

10 ಖಡ್ಗದಿಂದ ಅವರು ಬೀಳುವರು. ನರಿಗಳಿಗೆ ಆಹಾರವಾಗುವರು.

11 ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು