Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 70 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 70
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬೇಡಿಕೆ.

1 ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.

2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.

3 “ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ.

4 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.

5 ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು