Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 75 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 75
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಟೇತೆಂಬ ರಾಗ. ಆಸಾಫನ ಕೀರ್ತನೆ. ಒಂದು ಗೀತೆ.

1 ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.

2 “ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,

3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.

4 ‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.

5 ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.

6 ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.

7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.

8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.

10 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು