Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 87 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 87
ಕೋರಹೀಯರ ಕೀರ್ತನೆ. ಒಂದು ಗೀತೆ.

1 ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.

2 ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.

3 ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,

4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”

5 ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.

6 ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.

7 “ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು