Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 93 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 93

1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.

2 ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.

3 ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.

4 ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.

5 ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು