Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 98 - ಕನ್ನಡ ಸಮಕಾಲಿಕ ಅನುವಾದ


ಕೀರ್ತನೆ 98
ಒಂದು ಕೀರ್ತನೆ.

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.

2 ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.

3 ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.

4 ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.

5 ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ.

6 ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.

7 ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.

8 ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.

9 ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು