Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಪ್ರಕಟನೆ 15 - ಕನ್ನಡ ಸಮಕಾಲಿಕ ಅನುವಾದ


ಏಳುಮಂದಿ ದೂತರು, ಏಳು ಉಪದ್ರವಗಳು

1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.

2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,

3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.

4 ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.

5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.

6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.

8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು