ಯೆಹೆಜ್ಕೇಲನು 15 - ಕನ್ನಡ ಸಮಕಾಲಿಕ ಅನುವಾದಯೆರೂಸಲೇಮು, ಪ್ರಯೋಜನವಿಲ್ಲದ ದ್ರಾಕ್ಷಾಲತೆ 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, 2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? 3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ? 5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?” 6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ. 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. 8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” |
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.
Biblica, Inc.