Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 114 - ಪರಿಶುದ್ದ ಬೈಬಲ್‌

1 ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು.

2 ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು.

3 ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.

4 ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.

5 ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?

6 ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?

7 ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.

8 ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು